ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ
ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ ||1||
ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ ||2||
ಶತಲಕ್ಷ ಕೋಟಿ ಪ್ರಣತೆಗಳಲ್ಲಿ ಬೆಳಗಿ ಗೋ-ಘೃತ ತೈಲ ದೀಪವಚ್ಯುತ ನಿಲಯದಲಿ ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ||3||
ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ||4||
ತಿದ್ದುವ ವಿಮಲ ವೈಷ್ಣವರು ಬರುವುದು ಕಂ-ಡೆದ್ದು ಪದಗಳಿಗೆ ನಮಸ್ಕಾರವನು ಮಾಡದಲೆಉದ್ದು ಕನ್ನಡಿ ಮೇಲೆ ಉರುಳುವಂತಲ್ಲಿಂದಎದ್ದು ದುಷ್ಟರ ಪದಕೆ ಬಿದ್ದು ನೀ ನರಳುತಿಹೆಮದ್ದ ನಾ ಪೇಳುವೆನು ಬುದ್ಧಿಯಿಂ ತಿಳಿ ವಿಶ್ವದುದ್ಧಾರಕನು ಕಾಗಿನೆಲೆಯಾದಿಕೇಶವನಮುದ್ದು ನಾಮಸ್ಮರಣೆಯ ಮಾಡುತಲಿ ಜವನವರಗೆದ್ದು ಸಿರಿ ವೈಕುಂಠ ಪದವಿಯನು ಪಡೆ ಮರುಳೆ ||5||