ಪಡೆವುದರಿದು ನರಜನ್ಮವ,
ಪಡೆವುದರಿದು ಹರಭಕ್ತಿಯ,
ಪಡೆವುದರಿದು ಗುರುಕಾರುಣ್ಯವ,
ಪಡೆವುದರಿದು ಲಿಂಗಜಂಗಮಸೇವೆಯ,
ಪಡೆವುದರಿದು ಸತ್ಯಶರಣರನುಭಾವವ.
ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ
ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೆ.
ಪಡೆವುದರಿದು ನರಜನ್ಮವ,
ಪಡೆವುದರಿದು ಹರಭಕ್ತಿಯ,
ಪಡೆವುದರಿದು ಗುರುಕಾರುಣ್ಯವ,
ಪಡೆವುದರಿದು ಲಿಂಗಜಂಗಮಸೇವೆಯ,
ಪಡೆವುದರಿದು ಸತ್ಯಶರಣರನುಭಾವವ.
ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ
ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೆ.