ಪರಮಯೋಗಿಯ ನೋಡಿರೊ ನೀವೆಲ್ಲರು

ಪರಮಯೋಗಿಯ ನೋಡಿರೊ ನೀವೆಲ್ಲರು |
ಪರಮಯೋಗಿಯ ನೋಡಿರೊ ||
ಪರಮಯೋಗಿಯ ನೋಡಿ ಪ್ರೀತಿವಂತರಾಗಿ |
ನಿರಯವ ಕಳೆದು ಆನಂದ ಬೇಡುವರೆಲ್ಲ

ವಾನರ ವೇಷವಾಗಿ ಪರ್ವತ ಸೇರಿದಾ |
ಭಾನುನಂದನ ಮನೋಬಯಕಿಯ ಸಲ್ಲಿಸಿ ||
ಏನೆಂಬೆ ಬಲು ಒಂದು ರೂಪವಾಗಿ ತೋರಿ |
ತಾನೆ ತನ್ನೊಳಗೆದ್ದು ದುರುಳರ ಮೋಹಿಸಿದಾ ||1||

ವಿಷವನುಂಡು ಮೂರು ಲೋಕದೊಳಗೆ ಮೆರೆದು |
ಅಸುರ ಬಕನ ಸೀಳಿ ಧರಿಗೆ ಬಿಸುಟು |
ಶಶಿಮುಖಿಯಳ ಪ್ರೀತಿಬಡಿಸಿ ಅರ್ಜುನಗೊಲಿದು |
ಶಶಿಕುಲದಲಿ ಪುಟ್ಟಿ ದುರ್ಜನ ಸಂತಾಪಬಡಿಸಿ||2||

ಯತಿಯಾಗಿ ಜನಿಸಿ ಸುವಾಕ್ಯವ ಬಯಸಿ |
ಮತಿಹೀನ ಜನರ ಶಾಸ್ತ್ರವ ಖಂಡಿಸಿ ||
ತುತಿಸಿದ ಭಕ್ತರ್ಗೆ ಗತಿಯ ಕೊಡುವ ಪ್ರಾಣ-
ಪತಿ ವಿಜಯವಿಠ್ಠಲ ಬದರಿನಿಲಯ ನಿತ್ಯ ಪರಮ ||3||

Leave a Comment

Your email address will not be published. Required fields are marked *