ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು,
ಇದೇ ಕರ್ತೃಭೃತ್ಯರ ಭೇದ.
ಲಿಂಗಭಕ್ತನಾದಡೆ ಜಂಗಮಪಾದತೀರ್ಥಪ್ರಸಾದವ
ಲಿಂಗಕ್ಕೆ ಮಜ್ಜನ ಭೋಜನ ನೈವೇದ್ಯವ ಮಾಡಿ,
ಪ್ರಸಾದವ ಕೊಳ್ಳಬೇಕು. ಇದೇ ವರ್ಮ, ಇದೇ ಧರ್ಮ ಕಾಣಾ ಚೆನ್ನಮಲ್ಲಿಕಾರ್ಜುನಾ.
ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು,
ಇದೇ ಕರ್ತೃಭೃತ್ಯರ ಭೇದ.
ಲಿಂಗಭಕ್ತನಾದಡೆ ಜಂಗಮಪಾದತೀರ್ಥಪ್ರಸಾದವ
ಲಿಂಗಕ್ಕೆ ಮಜ್ಜನ ಭೋಜನ ನೈವೇದ್ಯವ ಮಾಡಿ,
ಪ್ರಸಾದವ ಕೊಳ್ಳಬೇಕು. ಇದೇ ವರ್ಮ, ಇದೇ ಧರ್ಮ ಕಾಣಾ ಚೆನ್ನಮಲ್ಲಿಕಾರ್ಜುನಾ.