ಲಿಂಗಪೂಜಕಂಗೆ ಫಲಪದಂಗಳಲ್ಲದೆ ಲಿಂಗವಿಲ್ಲ ?
ಧರ್ಮತ್ಯಾಗಿಗೆ ನರಕವಲ್ಲದೆ ಲಿಂಗವಿಲ್ಲ
ವೈರಾಗ್ಯಸಂಪನ್ನಂಗೆ ಮುಕ್ತಿಯಲ್ಲದೆ ಲಿಂಗವಿಲ್ಲ ?
e್ಞನಿಗೆ ಪರಿಭ್ರಮಣವಲ್ಲದೆ ಲಿಂಗವಿಲ್ಲ ?
ಇಂತಪ್ಪ ಭ್ರಾಂತನತಿಗಳದು ತನು ತಾನಾದ ಇರವೆಂತೆಂದಡೆ
ದ್ವೈತವಳಿದು ಅದ್ವೈತದಿಂದ ತನ್ನ ತಾನರಿದಡೆ ಚೆನ್ನಮಲ್ಲಿಕಾರ್ಜುನಲಿಂಗವು ತಾನೆ.