ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ.
ಎನ್ನ ವಂಶವಂಶದಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯಾ.
ಎನ್ನುವನರಸಿಯರಸಿ ಹಿಡಿದು ಕೊಲುತ್ತಿದೆಯಯ್ಯಾ.
ನಿನ್ನ ನಾ ಮರೆಹೊಕ್ಕೆ ಕಾಯಯ್ಯಾ.
ಎನ್ನ ಬಿನ್ನಪವನವಧರಿಸಾ, ಚೆನ್ನಮಲ್ಲಿಕಾರ್ಜುನಾ.
ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ.
ಎನ್ನ ವಂಶವಂಶದಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯಾ.
ಎನ್ನುವನರಸಿಯರಸಿ ಹಿಡಿದು ಕೊಲುತ್ತಿದೆಯಯ್ಯಾ.
ನಿನ್ನ ನಾ ಮರೆಹೊಕ್ಕೆ ಕಾಯಯ್ಯಾ.
ಎನ್ನ ಬಿನ್ನಪವನವಧರಿಸಾ, ಚೆನ್ನಮಲ್ಲಿಕಾರ್ಜುನಾ.